​​​

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯನ್ನು (ಕೆಸ್ಟೆಪ್ಸ್) ​​​2013 ರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯ ಒಂದು ಸ್ವಾಯತ್ತ ಸಂಸ್ಥೆಯಾಗಿ ಕರ್ನಾಟಕ ಸರ್ಕಾರವು ಸ್ಥಾಪಿಸಿದೆ. ಕೆಸ್ಟೆಪ್ಸ್ನ ಅಧ್ಯಕ್ಷತೆಯನ್ನು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವಹಿಸಿದ್ದು, ವಿಶೇಷ ನಿರ್ದೇಶಕರು (ತಾಂತ್ರಿಕ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಇವರು ಸಂಸ್ಥೆಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಆಡಳಿತ ಮಂಡಳಿಯು ಒಟ್ಟು ಒಂಬತ್ತು ಸದಸ್ಯರನ್ನು ಒಳಗೊಂಡಿದೆ.

ಕೆಸ್ಟೆಪ್ಸ್​ ಇಲಾಖೆಯ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಗಳ ನಡುವೆ ಪರಿಣಾಮಕಾರಿ ಸಹಯೋಗವನ್ನು ಸಾಧಿಸುವ ಮೂಲಕ ಪ್ರಯೋಜನಕಾರಿ ವಿವಿಧ ಕಾರ್ಯಕ್ರಮಗಳ ಯೋಜನೆ, ಮೇಲ್ವಿಚಾರಣೆ, ಪರಿಶೀಲನೆ ಹಾಗೂ ಮೌಲ್ಯಮಾಪನೆಯ ಜವಾಬ್ದಾರಿಯನ್ನು ನೀಡಲಾಗಿದೆ.

ದ್ಯೇಯೋದ್ದೇಶಗಳು:

  • ​ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ, ಹಾಗೂ ಅವುಗಳ ಅನುಷ್ಠಾನದಲ್ಲಿ ಇಲಾಖೆಗೆ ಸಹಕರಿಸಲು ಒಂದು       ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುವುದು
  • ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನಗಳನ್ನು ಹಂಚಲು ಮತ್ತು ಇಲಾಖೆಯ ಅಂಗಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ನೋಡಲ್ ಸಂಸ್ಥೆಯಾಗಿ ಕಾರ್ಯನಿರ್ವಹಿಸುವುದು.
  • ಕರ್ನಾಟಕ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅನುದಾನಿತ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿತ ಚಟುವಟಿಕೆಗಳನ್ನು ಸಂಘಟಿಸುವುದು.
  • ರಾಜ್ಯದ ದೀರ್ಘಾವಧಿ ಅಭಿವೃಧ್ಧಿಗೆ ಉಪಯುಕ್ತವಾಗುವಂತಹ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿರುವ ಆಧ್ಯತಾ ವಲಯಗಳನ್ನು ಗುರುತಿಸಿ, ಅಭಿವೃಧ್ಧಿಪಡಿಸುವುದು.
  • ಕರ್ನಾಟಕದಲ್ಲಿ ನ್ಯಾನೋ ಪಾರ್ಕ್‍ಗಳನ್ನು ಅಭಿವೃಧ್ಧಿಗೊಳಿಸಿ, ನ್ಯಾನೋ-ವಿಜ್ಞಾನ ಮತ್ತು ನ್ಯಾನೋ-ತಂತ್ರಜ್ಞಾನಗಳನ್ನು ಪ್ರಚುರಪಡಿಸಲು ಎಲ್ಲಾ ವಿಧದಲ್ಲೂ ನೆರವಾಗುವ ನೋಡಲ್ ಸಂಸ್ಥೆಯಾಗಿ ಕಾರ್ಯನಿರ್ವಹಿಸುವುದು.
  • ನ್ಯಾನೋ-ವಿಜ್ಞಾನ, ನ್ಯಾನೋ-ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಇತರ ನವೀನ ತಂತ್ರಜ್ಞಾನಗಳಲ್ಲಿ ಕೈಗಾರಿಕಾ ಬಂಡವಾಳ ಹೂಡುವ ಆಸಕ್ತಿ ಹೊಂದಿರುವ ಎಲ್ಲಾ ಹೂಡಿಕೆದಾರರಿಗೆ ಮತ್ತು ಉದ್ಯಮಿಗಳಿಗೆ ನೆರವನ್ನು ನೀಡುವುದು.
  • ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಜಂಟಿ ಕಾರ್ಯಕ್ರಮಗಳನ್ನು, ಸಹಯೋಗದಲ್ಲಿ ಹಮ್ಮಿಕೊಳ್ಳಲು ಭಾರತ ಸರ್ಕಾರದ ಸಂಸ್ಥೆಗಳಾದಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬಾಹ್ಯಾಕಾಶ ಇಲಾಖೆ, ಸಂಸ್ಕøತಿ ಇಲಾಖೆ, ಭೂವಿಜ್ಞಾನ ಇಲಾಖೆ ಮತ್ತು ಇತರ ಸಂಸ್ಥೆಗಳೊಂದಿಗೆ ಸಂಪರ್ಕ ಸಾಧಿಸುವುದು.
  • ರಾಜ್ಯಾದ್ಯಂತ ಅವಶ್ಯಕತೆಗೆ ಅನುಗುಣವಾಗಿ ವಿಜ್ಞಾನ ನಗರ, ವಿಜ್ಞಾನ ಕೇಂದ್ರ (ವರ್ಗ 1 ಮತ್ತು 2) ಮತ್ತು ಇತರ ವಿಜ್ಞಾನ ಸಂಸ್ಥೆಗಳ ಸ್ಥಾಪನೆಗೆ ಸಂಬಂಧಪಟ್ಟ ಎಲ್ಲರೊಡನೆ ಸಂಪರ್ಕ ಸಾಧಿಸುವುದರ ಜೊತೆಗೆ, ಸ್ಥಾಪಿತ ಕೇಂದ್ರಗಳ ಕಾರ್ಯಚಟುವಟಿಕೆಗಳ ಪರಿಶೀಲನೆ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನೆಗಳನ್ನು ಮಾಡುವುದು

ಆಡಳಿತ ಮಂಡಳಿ:

​ಕ್ರ. ಸಂ.​ಹೆಸರು ಮತ್ತು ವಿಳಾಸ​ಹುದ್ದೆ
​1​ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ​ಅಧ್ಯಕ್ಷರು
​2​ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಬಿ ಎಂಡ್ ಆರ್), ಆರ್ಥಿಕ ಇಲಾಖೆ, ಕರ್ನಾಟಕ ಸರ್ಕಾರ​ಸದಸ್ಯರು
​3​ಆಯುಕ್ತರು, ಕಾಲೇಜು ಶಿಕ್ಷಣ, ಕರ್ನಾಟಕ ಸರ್ಕಾರ​ಸದಸ್ಯರು
​4​ವಿಶೇಷ ಅಧಿಕಾರಿ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ​ಸದಸ್ಯರು​
​5​ನಿರ್ದೇಶಕರು, ಜವಾಹರ್‍ಲಾಲ್ ನೆಹರೂ ತಾರಾಲಯ, ಬೆಂಗಳೂರು​ಸದಸ್ಯರು​
​6​ಕಾರ್ಯಕಾರಿ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಬೆಂಗಳೂರು​ಸದಸ್ಯರು​
​7​ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ, ಬೆಂಗಳೂರು ​ಸದಸ್ಯರು​
​8​ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿ.ಎಸ್.ಇ.ಆರ್.ಟಿ), ಬೆಂಗಳೂರು​ಸದಸ್ಯರು​
​9​ವಿಶೇಷ ನಿರ್ದೇಶಕರು (ತಾಂತ್ರಿಕ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ​ಸದಸ್ಯರು​