​ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಪ್ರಸ್ತುತವಿರುವ ಅಭಿವೃದ್ಧಿಶೀಲ ಹಾಗೂ ಸ್ಪರ್ಧಾತ್ಮಕ ಆರ್ಥಿಕತೆಯ ಪರಿಸ್ಥಿತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಯಾವುದೇ ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶಕ್ತಿಶಾಲಿ ಸಾಧನಗಳೆಂದು ಪರಿಗಣಿಸಲಾಗಿದೆ. ಆದುದರಿಂದ, ವಿಜ್ಞಾನ ಮತ್ತು ತಂತ್ರಜ್ಞಾನಗಳು ಇಂದಿನ ಜಗತ್ತಿನಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಸಾಂಸ್ಕøತಿಕ ಬೆಳವಣಿಗೆಯ ಯಂತ್ರವಾಗಿ ಮಾರ್ಪಟ್ಟಿದ್ದು, ಜನಸಾಮಾನ್ಯರ ದೈನಂದಿನ ಜೀವನದ ಮೇಲೆ ಅತ್ಯಂತ ಪ್ರಭಾವ ಬೀರುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳು ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ಅಂಧ ಶ್ರದ್ಧೆ ಮತ್ತು ಮೂಢನಂಬಿಕೆಗಳನ್ನು ಹೋಗಲಾಡಿಸಲು, ಸಂಪತ್ತನ್ನು ಸೃಜಿಸಲು, ನೈಸಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಗೆ ಅತ್ಯವಶ್ಯಕವಾಗಿವೆ. ಇದು ಸಮಾಜದ, ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ವೈಜ್ಞಾನಿಕ ಪ್ರಗತಿಗಳು ಹಾಗೂ ತಾಂತ್ರಿಕ ಆವಿಷ್ಕಾರಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಆರ್ಥಿಕತೆಯ ಎಲ್ಲಾ ವಿಭಾಗಗಳಲ್ಲಿ ಮುಖ್ಯ ವಾಹಿನಿಗೆ ತರುವುದರ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ಆದುದರಿಂದ, ಗ್ರಾಮೀಣ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುವ ಸಲುವಾಗಿ ವೈಜ್ಞಾನಿಕ ಬೆಳವಣಿಗೆ, ಅರಿವು ಹಾಗೂ ಮನೋಭಾವನೆಗಳನ್ನು ಸಮಾಜದಲ್ಲಿ ಪ್ರಸರಿಸುವ ಅವಶ್ಯಕತೆಯಿದೆ. ಮುಂದುವರೆದು, ವೈಜ್ಞಾನಿಕ ಅರಿವು ಇಂದಿನ ಹೆಚ್ಚುತ್ತಿರುವ ಸ್ಪರ್ಧಾತ್ಮಕ ಜಾಗತಿಕ ಮಾರುಕಟ್ಟೆಯಲ್ಲಿ ಸಮಾಜದ ಎಲ್ಲಾ ಸ್ತರಗಳನ್ನು ಬಲವರ್ಧಿಸುವುದರೊಂದಿಗೆ, ಜನರ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯನ್ನು ಕರ್ನಾಟಕ ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿಗಳನ್ನು ಸಂಯೋಜಿಸಲು 1981 ರಲ್ಲಿ ಸ್ಥಾಪಿಸಲಾಯಿತು.​

 

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಗಳು


ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್):

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ, ಹಾಗೂ ಅವುಗಳ ಅನುಷ್ಠಾನದಲ್ಲಿ ಇಲಾಖೆಗೆ ಸಹಕರಿಸಲು ಒಂದು ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಿ, ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನಗಳನ್ನು ಹಂಚಲು ನೋಡಲ್ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕ.ವಿ.ತಂ.ಅ.):

ಸೆಪ್ಟೆಂಬರ್ 2005 ರಲ್ಲಿ ಇಸ್ರೋದ ಮಾಜಿ ಅಧ್ಯಕ್ಷರಾದ ಪ್ರೊ|| ಯು. ಆರ್. ರಾವ್ ರವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾದ ಸ್ವಾಯತ್ತ ಸಂಸ್ಥೆಯಾಗಿದ್ದು, ಪ್ರಸ್ತುತ ಇಸ್ರೋ ಸ್ಯಾಟಲೈಟ್ ಸೆಂಟರ್‍ನ ನಿವೃತ್ತ ನಿರ್ದೇಶಕರಾದ ಡಾ|| ಎಸ್.ಕೆ. ಶಿವಕುಮಾರ್ ರವರು ಅಕಾಡೆಮಿಯ ಅಧ್ಯಕರಾಗಿದ್ದಾರೆ. ಶ್ರೇಷ್ಠ ವಿಜ್ಞಾನಿಗಳು, ಪ್ರಖ್ಯಾತ ಶಿಕ್ಷಣ ತಜ್ಞರು ಹಾಗೂ ಹಿರಿಯ ಆಡಳಿತಗಾರನ್ನು ಒಳಗೊಂಡ ಒಟ್ಟು 14 ಸದಸ್ಯರುಗಳುನ್ನು ಹೊಂದಿದೆ. ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು ಹಾಗೂ ಮೂಲ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆಯನ್ನು ಉತ್ತೇಜಿಸುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

 

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ (ಕೆ.ಎಸ್.ಸಿ.ಎಸ್.ಟಿ.):

ಕರ್ನಾಟಕ ಸರ್ಕಾರದ ಒಂದು ನೋಂದಾಯಿತ ಸೊಸೈಟಿಯಾಗಿದ್ದು, 1975 ರ ಸೊಸೈಟಿ ನೋಂದಾವಣೆ ಅಧಿನಿಯಮ 1960ರಡಿ ಸ್ಥಾಪಿಸಲಾಗಿದೆ.  ಮಂಡಳಿಯ ಆಡಳಿತ ಮಂಡಳಿ ಹಾಗೂ ಕಾರ್ಯಕಾರಿ ಸಮಿತಿಯನ್ನು ಸರ್ಕಾರವು ಪ್ರತಿ 3 ವರ್ಷಗಳಿಗೊಮ್ಮೆ ರಚಿಸುತ್ತದೆ. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳು ಮಂಡಳಿಯ ಅಧ್ಯಕ್ಷರಾಗಿದ್ದು, ಭಾರತೀಯ ವಿಜ್ಞಾನ ಮಂದಿರದ ನಿರ್ದೇಶಕರು ಮಂಡಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಚಾಲ್ತಿಯಲ್ಲಿರುವ ಹಿಂದುಳಿದ, ಗ್ರಾಮೀಣ ನಿರುದ್ಯೋಗ ಮತ್ತು ಬಡತನ ಸಂಬಂಧಿತ ರಾಜ್ಯದ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಕ್ಷೇತ್ರಗಳನ್ನು ಗುರುತಿಸುವುದು ಈ ಮಂಡಳಿಯ ಉದ್ದೇಶವಾಗಿದೆ.

 

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿ.ತಂ.ದಾ.ಸ.):

ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವನ್ನು  2008 ರಲ್ಲಿ ಖ್ಯಾತ ವಿಜ್ಞಾನಿ ಭಾರತರತ್ನ ಪ್ರೊ. ಸಿ. ಎನ್. ಆರ್. ರಾವ್, ಎಫ್.ಆರ್.ಎಸ್., ರವರ ಅಧ್ಯಕ್ಷತೆಯಲ್ಲಿ ರಚಿಸಿತು. ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜಾನ ಮತ್ತು ತಂತ್ರಜ್ಞಾನ ಇಲಾಖೆಯಡಿ, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಯೋಜನೆಗಳ ಸಂಯೋಜನೆ ಹಾಗೂ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ಸರ್ವೋನ್ನತ ಮಂಡಳಿಯಾಗಿ ಕಾರ್ಯನಿರ್ವಹಿಸುತ್ತದೆ.

 

ಜವಾಹರ್‍ಲಾಲ್ ನೆಹರು ತಾರಾಲಯ

ಬೆಂಗಳೂರಿನ ಜವಾಹರ್‍ಲಾಲ್ ನೆಹರು ತಾರಾಲಯವನ್ನು ಬೆಂಗಳೂರು ಮಹಾನಗರ ಪಾಲಿಕೆಯು (ಈಗಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) 1989ರಲ್ಲಿ ಸ್ಥಾಪಿಸಿದೆ. ತಾರಾಲಯದ ಆಡಳಿತ ನಿರ್ವಹಣೆಯನ್ನು 1992ರಲ್ಲಿ ಸ್ಥಾಪಿಸಲ್ಪಟ್ಟ, ಬೆಂಗಳೂರು ಅಸೋಷಿಯೇಶನ್ ಫಾರ್ ಸೈನ್ಸ್ ಎಜುಕೇಷನ್ (ಬೇಸ್) ಇವರಿಗೆ ನೀಡಲಾಗಿದೆ. ಬೇಸ್ ಕರ್ನಾಟಕ ಸೊಸೈಟಿ ನೋಂದಾವಣೆ ಅಧಿನಿಯಮದ ಅಡಿಯಲ್ಲಿ ಸ್ಥಾಪಿಸಲಾಗಿರುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ವಾರ್ಷಿಕ ಅನುದಾನದಿಂದ ಈ ತಾರಾಲಯವು ಬೆಂಬಲಿಸಲ್ಪಟ್ಟಿದೆ.

ಮುಂಬರುವ ಕಾರ್ಯಕ್ರಮಗಳು

KST Academy          Bangalore India Nano opens in new window          Bengaluru Science Gallery opens in new window

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top