ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ:

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಜ್ಯ ಮಟ್ಟದ ವಾರ್ಷಿಕ ವಿಜ್ಞಾನ ಮತ್ತುತಂತ್ರಜ್ಞಾನ ಪ್ರಧಾನ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿದೆ.  ಈ ವರ್ಷ ಅಕಾಡೆಮಿಯು ರೇವಾ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಸಂಸ್ಥೆಯ ಬೆಂಬಲದೊಂದಿಗೆ “ಮಾನವ ಕುಲದ ಭವಿಷ್ಯವನ್ನು ರೂಪಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ” ಸಮ್ಮೇಳವನ್ನು ಬೆಂಗಳೂರಿನಲ್ಲಿ ಜನವರಿ 18, 19 2018 ರಂದು ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.  

ಅಕಾಡೆಮಿಯ ಎರಡು ದಿನಗಳ ಸಮ್ಮೇಳನದಲ್ಲಿ ಶ್ರೇಷ್ಠ ವಿಜ್ಞಾನಿಗಳು, ತಂತ್ರಜ್ಞಾನಿಗಳೂ, ಉದ್ಯಮಿಗಳಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಮಂಚೂಣಿ ವಿಷಯಗಳಲ್ಲಿ ಆಹ್ವಾನಿತ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ.  ಅಲ್ಲದೆ, ವಿದ್ಯಾರ್ಥಿಗಳು, ವಿಜ್ಞಾನ ಅಧ್ಯಾಪಕರು, ವಿಜ್ಞಾನ ಬರಹಗಾರರು/ ಸಂವಹನಕಾರರು, ಎನ್.ಜಿ.ಒ./ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಇತರೆ ಆಸಕ್ತರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ.  
ವಿದ್ಯಾರ್ಥಿಗಳು, ಶಿಕ್ಷಕರು, ಅಧ್ಯಾಪಕರು, ಅಧಿಕಾರಿಗಳು ಹಾಗೂ ಆಸಕ್ತ ಜನಸಾಮಾನ್ಯರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುವುದು, ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುವುದು, ವಿಜ್ಞಾನ ಮತ್ತು ತಂತ್ರಜ್ಞಾನಗಳ ಬೆಳವಣಿಗೆಗಳನ್ನು ಜನಪ್ರಿಯಗೊಳಿಸುವುದು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶಗಳಾಗಿವೆ.