ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವು ಆಕ್ಟೋಬರ್ 2008 ರಲ್ಲಿ ಪ್ರಸಿದ್ದ ವಿಜ್ಞಾನಿಯಾದ ಭಾರತ ರತ್ನ ಪ್ರೊಫೆಸರ್ ಸಿ. ಎನ್. ಆರ್. ರಾವ್, ಎಫ್.ಆರ್.ಎಸ್., ಅಧ್ಯಕ್ಷರು, ಪ್ರಧಾನ ಮಂತ್ರಿಯ ವಿಜ್ಞಾನ ಸಲಾಹಾ ಮಂಡಳಿ ಹಾಗೂ ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕರು ಹಾಗೂ ಗೌರವಾನ್ವಿತ ಅಧ್ಯಕ್ಷರು, ಜವಹಾರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಸಂಸ್ಥೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು. 

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಯೋಜನೆಗಳ ಸಂಯೋಜನೆ ಹಾಗೂ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ಸರ್ವೋನ್ನತ ಮಂಡಳಿಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಶಿಕ್ಷಣ ಮತ್ತು ಸಂಶೋಧನೆಗಳನ್ನು ಉತ್ತೇಜಿಸುವು ಇದರ ಪ್ರಮುಖ ಉದ್ದೇಶವಾಗಿದೆ.  ಶಿಕ್ಷಣ ಸಂಸ್ಥೆಗಳಿಗೆ ವೈಜ್ಞಾನಿಕ ಮತ್ತು ತಾಂತ್ರಿಕ ಅಗತ್ಯತೆಗಳನ್ನು ಪೂರೈಸಿ, ಅದನ್ನು ಬಲಪಡಿಸುವುದರಲ್ಲಿ ವಿ.ತಂ.ದಾ.ಸ. ಸಂಸ್ಥೆಯು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಸಾಧಿಸುವುದಕ್ಕೆ ವಿ.ತಂ.ದಾ.ಸ. ಸಂಸ್ಥೆಯು ಮೂಲಭೂತ ವಿಜ್ಞಾನ ಶಿಕ್ಷಣದಲ್ಲಿ ಒಂದು ಮಾದರಿ ಬದಲಾವಣೆಯನ್ನು ತರಲು ಮತ್ತು ವೈಜ್ಞಾನಿಕ ಸಂಶೋಧನೆಗಳನ್ನು ಜನರ ಬಳಿಗೆ ತೆಗೆದುಕೊಂಡುಹೊಗಲು  ಹಲವು ಕಾರ್ಯಯೋಜನೆಗಳನ್ನು ರೂಪಿಸುತ್ತಿದೆ.  ಇಂತಹ ಅನೇಕ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುತ್ತಿದೆ.

ಕಾರ್ಯಕ್ರಮಗಳು:

1.  ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯದ ಶ್ರೇಷ್ಠ ಕೇಂದ್ರಗಳ ಸ್ಥಾಪನೆ (CESEM)
2.  ವಿಜ್ಞಾನ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಸೃಜನಶೀಲ ಕೇಂದ್ರಗಳ ಸ್ಥಾಪನೆ (CISEM)
3.  ಯುವ ವಿಜ್ಞಾನಿಗಳಿಗೆ ಸಂಶೋಧನೆಗಾಗಿ ಮೂಲಧನ (SMYSR)
4.  ಕರ್ನಾಟಕದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲ ಸೌಕರ್ಯಾಭಿವೃದ್ಧಿಗೆ ನಿದಿ (K-FIST)
5.  ಇಂಜಿನಿಯರಿಂಗ್ ವಿಷಯಗಳಲ್ಲಿ ಕಾರ್ಯ ಮಾದರಿಗಳ ತಯಾರಿಕೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಹಾಯನುದಾನ 
6.  ವಿಜ್ಞಾನ ಮೇಳಗಳ ಆಯೋಜನೆ 
7.  ಪ್ರತಿಭಾವಂತ ಶಿಕ್ಷಕರ ಸಂಶೋಧನೆಗಾಗಿ ಅನುದಾನ (RFTT)