ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ನಮ್ಮ ಬಗ್ಗೆ

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು (Karnataka Science and Technology Promotion Society – KSTePS) 2013 ರಲ್ಲಿ ಕರ್ನಾಟಕ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯಲ್ಲಿ, 1960ರ ಸೊಸೈಟಿಗಳ ನೋಂದಣಿ ಕಾಯ್ದೆಯಡಿ ಸ್ಥಾಪಿಸಲಾದ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಕೆಸ್ಟೆಪ್ಸ್ ನ ಧ್ಯೇಯೋದ್ದೇಶಗಳು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ ಹಾಗೂ ಅನುಷ್ಠಾನದ ನೆರವಿನ ಒಂದು ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಿ, ರಾಜ್ಯಾದ್ಯಂತ ಇಲಾಖೆಯ ಕಾರ್ಯಕ್ರಮಗಳ ನಿಧಿಗಳ ಹಂಚಿಕೆಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುವುದಾಗಿದೆ. ಅಲ್ಲದೆ, ರಾಜ್ಯದ ದೀರ್ಘಾವಧಿ ಅಭಿವೃಧ್ಧಿಗೆ ಉಪಯುಕ್ತವಾಗುವಂತಹ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿರುವ ಆಧ್ಯತಾ ವಲಯಗಳನ್ನು ಗುರುತಿಸಿ ಅವುಗಳನ್ನು ಅಭಿವೃಧ್ಧಿಪಡಿಸುವುದಾಗಿದೆ. ಸೊಸೈಟಿಯು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಸದಸ್ಯರುಗಳನ್ನು ಹೊಂದಿದೆ. ನಿರ್ದೇಶಕರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಇವರು ಸಂಸ್ಥೆಯ ಸದಸ್ಯ ಕಾರ್ಯದರ್ಶಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುತ್ತಾರೆ.