ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಗಳು

ಇಂದಿನ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ಬೆಳವಣಿಗೆ ಮತ್ತು ಅಭಿವೃದ್ಧಿಯ ಬಹು ಶಕ್ತಿಯುತ ಚಾಲನಾಶಕ್ತಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನವು, ಬಹುತೇಕ ತಂತ್ರಜ್ಞಾನ ಅಭಿವೃದ್ಧಿಯ ಮೂಲಕ, ನಾವು ಬದುಕುವ ರೀತಿಯ ಮೇಲೆ ಅಗಾಧ ಪರಿಣಾಮವನ್ನು ಉಂಟು ಮಾಡಿದ್ದು, ನಮ್ಮ ದೈನಂದಿನ ಜನಜೀವನವನ್ನು ಉತ್ತಮ ಹಾಗೂ ಸುಲಭಪಡಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅನನ್ಯವಾಗಿದೆ. ಆದುದರಿಂದ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿಯು ವಿಶೇಷವಾಗಿ ಜನಜೀವನ ಮಟ್ಟವನ್ನು ಹೆಚ್ಚಿಸಲು, ಮೂಢನಂಬಿಕೆ ಮತ್ತು ಅಂಧಶ್ರದ್ಧೆಯನ್ನು ತೊಲಗಿಸಲು, ಸಂಪತ್ತನ್ನು ವೃದ್ಧಿಸಲು ಹಾಗೂ ನೈಸರ್ಗಿಕ ಸಂಪನ್ಮೂಲಗಳು ಮತ್ತು ಜೀವ ವೈವಿಧ್ಯತೆಯನ್ನು ಕಾಪಾಡಿಕೊಳ್ಳಲು ಬಹಳ ಮುಖ್ಯವಾಗಿದೆ.

 

ಈ ಹಿನ್ನೆಲೆಯಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿಯ ಎಲ್ಲಾ ರಂಗಗಳಲ್ಲೂ ಮುಖ್ಯವಾಹಿನಿಗೆ ತರುವುದು ಅವಶ್ಯವಿದ್ದು, ವೈಜ್ಞಾನಿಕ ಮುನ್ನಡೆ ಮತ್ತು ತಂತ್ರಜ್ಞಾನದ ಆವಿಷ್ಕಾರಗಳನ್ನು ಸಮಾಜದ ಒಳಿತಿಗಾಗಿ, ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬಳಸಿಕೊಳ್ಳುವಂತಾಗಬೇಕಾಗಿದೆ.

 

ಆದುದರಿಂದ, ವೈಜ್ಞಾನಿಕ ಅಭಿವೃದ್ಧಿಯ ಮಾಹಿತಿಯನ್ನು ಪ್ರಸಾರ ಮಾಡುವ ಮೂಲಕ ವೈಜ್ಞಾನಿಕ ಅರಿವನ್ನು ಮೂಡಿಸಿ, ವೈಜ್ಞಾನಿಕ ಮನೋಭಾವನೆಯನ್ನು ಸಮಾಜದ ಎಲ್ಲಾ ಸ್ತರಗಳಲ್ಲೂ ಬೆಳೆಸಿ, ಗ್ರಾಮೀಣ ಜನರ ಜೀವನಮಟ್ಟವನ್ನು ಉತ್ತಮಗೊಳಿಸಬೇಕಾಗಿದೆ. ಅಲ್ಲದೇ, ವೈಜ್ಞಾನಿಕ ಜಾಗೃತಿಯು ಸಂಪೂರ್ಣ ಸಾಮಾಜಿಕ ಚೌಕಟ್ಟಿನ ಬಲವರ್ಧನೆಗೆ ಮತ್ತು ಸಬಲೀಕರಣಕ್ಕೆ ಹಾಗೂ ಹೆಚ್ಚುತ್ತಿರುವ ಇಂದಿನ ಜಾಗತಿಕ ಮಾರುಕಟ್ಟೆಯಲ್ಲಿ ಜನಸಾಮಾನ್ಯರ ಸಮಗ್ರ ಅಭಿವೃದ್ಧಿಯನ್ನು ಸಾಧಿಸಲು ಸಹ ನೆರವಾಗಲಿದೆ.

 

ಈ ನಿಟ್ಟಿನಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಈ ಕೆಳಕಂಡ ಆರು ಅಂಗ ಸಂಸ್ಥೆಗಳ ಮುಖಾಂತರ ನಾಗರೀಕರ ಸಬಲೀಕರಣ ಹಾಗೂ ಸರ್ವರನ್ನೊಳಗೊಂಡ ಜಾಗೃತ ಮತ್ತು ಸುಸ್ಥಿರ ಸಮಾಜವು ರಾಜ್ಯಾದ್ಯಂತ ಬೆಳೆಯಲು ಅನುವಾಗುವಂತೆ ಹಲವಾರು ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿವೆ:

 

  1. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

 

ಕೆಸ್ಟೆಪ್ಸ್ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ, ಹಾಗೂ ಅವುಗಳ ಅನುಷ್ಠಾನದಲ್ಲಿ ಇಲಾಖೆಗೆ ಸಹಕರಿಸಲು ಒಂದು ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಿ, ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನಗಳನ್ನು ಹಂಚಲು ನೋಡಲ್ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಜಾಲತಾಣ: https://ksteps.karnataka.gov.in

 

  1. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ (ಕೆ.ಎಸ್.ಸಿ.ಎಸ್.ಟಿ)

 

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯು ಕರ್ನಾಟಕ ಸರ್ಕಾರದ ಒಂದು ನೋಂದಾಯಿತ ಸೊಸೈಟಿಯಾಗಿದ್ದು, 1960ರ ಸೊಸೈಟಿ ನೋಂದಾವಣೆ ಅಧಿನಿಯಮದಡಿಯಲ್ಲಿ 1975 ರಲ್ಲಿ ಸ್ಥಾಪಿಸಲಾಗಿದೆ. ಮಂಡಳಿಯು ವಿಜ್ಞಾನ ಆಧಾರಿತ ಬಳಕೆ ವಿಧಾನಗಳ ಬಗ್ಗೆ ತಿಳುವಳಿಕೆ ಮೂಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಂಯೋಜಿಸುವುದು, ಸ್ಥಳೀಯ-ನಿರ್ದಿಷ್ಟ ಸಮಸ್ಯೆಗಳನ್ನು ಬಗೆಹರಿಸಲು ಸಮಾಜವು ಅನುಸರಿಸಲು ಸೂಕ್ತವಾದ ತಾಂತ್ರಿಕತೆಗಳನ್ನು ಅಭಿವೃದ್ಧಿಗೊಳಿಸುವುದು ಮತ್ತು ಜನಪ್ರಿಯಗೊಳಿಸುವುದು ಮತ್ತು ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಮಾನವ ಸಂಪನ್ಮೂಲಗಳನ್ನು ಉತ್ತಮಗೊಳಿಸುವುದು ಮತ್ತು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.

ಜಾಲತಾಣ: https://kscst.karnataka.gov.in/

 

  1. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆ.ಎಸ್.ಟಿ.ಎ.)

 

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯುನ್ನು (ಕವಿತಂಅ) ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಪದ್ಮ ವಿಭೂಷಣ ಪುರಸ್ಕøತ ದಿವಂಗತ ಪ್ರೊ. ಯು. ಆರ್. ರಾವ್, ನಿವೃತ್ತ ಅಧ್ಯಕ್ಷರು, ಇಸ್ರೋ/ಕಾರ್ಯದರ್ಶಿ, ಬಾಹ್ಯಾಕಾಶ ಇಲಾಖೆ, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ 2005ರ ಜುಲೈನಲ್ಲಿ ಸ್ಥಾಪಿಸಲಾಗಿದೆ. ಅಕಾಡೆಮಿಯು ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು ಹಾಗೂ ಮೂಲ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆಯನ್ನು ಉತ್ತೇಜಿಸುವುದಾಗಿದೆ.

ಜಾಲತಾಣ: https://ksta.karnataka.gov.in

 

  1. ಜವಾಹರಲಾಲ್ ನೆಹರೂ ತಾರಾಲಯ (ಜೆ.ಎನ್.ಪಿ.)

 

ಬೆಂಗಳೂರಿನ ಜವಾಹರ್‍ಲಾಲ್ ನೆಹರು ತಾರಾಲಯವನ್ನು ಬೆಂಗಳೂರು ಮಹಾನಗರ ಪಾಲಿಕೆಯು (ಈಗಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) 1989ರಲ್ಲಿ ಸ್ಥಾಪಿಸಿದೆ. ತಾರಾಲಯದ ಆಡಳಿತ ನಿರ್ವಹಣೆಯನ್ನು 1992ರಲ್ಲಿ ಸ್ಥಾಪಿಸಲ್ಪಟ್ಟ, ಬೆಂಗಳೂರು ಅಸೋಷಿಯೇಶನ್ ಫಾರ್ ಸೈನ್ಸ್ ಎಜುಕೇಷನ್ (ಬೇಸ್) ಇವರಿಗೆ ನೀಡಲಾಗಿದೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದು, ಅನೌಪಚಾರಿಕ ವಿಜ್ಞಾನ ಶಿಕ್ಷಣವನ್ನು ನೀಡುವುದು ಮತ್ತು ಆಕಾಶ ಮಂದಿರದ ಪ್ರದರ್ಶನಗಳನ್ನು ಹಮ್ಮಿಕೊಳ್ಳುವುದು ತಾರಾಲಯದ ಪ್ರಮುಖ ಕಾರ್ಯಕ್ರಮಗಳಾಗಿವೆ.

ಜಾಲತಾಣ: https://taralaya.karnataka.gov.in/

 

  1. ದಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ (ಡಿ.ಆರ್.ಎಸ್.ಸಿ.)

 

ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಕರ್ನಾಟಕದ ಮೊದಲ ಪ್ರಾದೇಶಿಕ ವಿಜ್ಞಾನ ಕೇಂದ್ರವಾಗಿ ಭಾರತ ಸರ್ಕಾರದ ಸಂಸ್ಕøತಿ ಸಚಿವಾಲಯದ ಸಹಯೋಗದೊಂದಿಗೆ ಫೆಬ್ರವರಿ 2012ರಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಈ ವಿಜ್ಞಾನ ಕೇಂದ್ರವನ್ನು 2012ರ ಫೆಬ್ರವರಿ 28 ರಂದು ಲೋಕಾರ್ಪಣೆ ಮಾಡಲಾಗಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸದರಿ ಕೇಂದ್ರವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಹಾಗೂ ಉದ್ಯಮಗಳಲ್ಲಿ ಮತ್ತು ಮಾನವ ಕಲ್ಯಾಣದಲ್ಲಿ ಅವುಗಳ ಅನ್ವಯಿಕಗಳನ್ನು ಬಿಂಬಿಸುವ ಮೂಲಕ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ಜನಪ್ರಿಯಗೊಳಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ.

ಜಾಲತಾಣhttps://rscdharwad.karnataka.gov.in/

 

  1. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ (ಪಿ.ಆರ್.ಎಸ್.ಸಿ.)

 

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಭಾರತ ಸರ್ಕಾರದ ಸಂಸ್ಕೃತಿ ಇಲಾಖೆಯ ಅಂಗಸಂಸ್ಥೆಯಾದ ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಪರಿಷತ್ ಹಾಗೂ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಹಯೋಗ ಮತ್ತು ಸಮಾನ ಅನುಪಾತದ ಅನುದಾನದೊಂದಿಗೆ     (50 : 50) ಸ್ಥಾಪಿಸಲಾಗಿದೆ. ಈ ಕೇಂದ್ರವು ಮಂಗಳೂರಿನ ಸಮೀಪವಿರುವ ಪಿಲಿಕುಳ ನಿಸರ್ಗಧಾಮದಲ್ಲಿದ್ದು, ಅದರ ಆಡಳಿತವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸೊಸೈಟಿಯು ನಿರ್ವಹಿಸುತ್ತಿದೆ. ಭಾರತದ ಪ್ರಪ್ರಥಮ 3ಡಿ ತಾರಾಲಯವಾದ ಸ್ವಾಮಿ ವಿವೇಕಾನಂದ ತಾರಾಲಯವನ್ನು ಮಾರ್ಚ್ 1, 2018 ರಂದು ಪಿಲಿಕುಳದ ಆವರಣದಲ್ಲಿ ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ‘ಇನ್ನೋವೇಷನ್ಹಬ್’ಕೂಡ ಕಾರ್ಯಾರಂಭ ಮಾಡಲಿದೆ. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ತನ್ನ ಹತ್ತು ಹಲವು ಕಾರ್ಯಕ್ರಮಗಳಿಂದ ಶೈಕ್ಷಣಿಕ ಕ್ಷೇತ್ರದ ಗಮನ ಸೆಳೆದಿದೆ. ತನ್ನ ಪರಿಸರ ಸಂಬಂಧಿ ಕಾರ್ಯಕ್ರಮಗಳಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಶಸ್ತಿ ಪಡೆದಿದೆ.

ಜಾಲತಾಣ: https://pilikula.karnataka.gov.in/