ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಪ್ರಾದೇಶಿಕ & ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳು

ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರಗಳನ್ನು ಜನಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕತೆಗಳನ್ನು ಬೆಳೆಸಲು ಅನುವಾಗುವಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಾಗೂ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಭಾರತ ಸರ್ಕಾರದ ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಸ್ಥಾಪಿಸಲಾಗಿದ್ದು, ಈ ಎರಡು ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಧಾರವಾಡ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿಂದ ಹಲವಾರು ಜನಸಮೂಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

  

 Pilikula Sc Dharwad

 

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವರ್ಚುವಲ್ ಟೂರ್                   ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ವರ್ಚುವಲ್ ಟೂರ್

 

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಸಣ್ಣ ಪ್ರಮಾಣದ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಾಗಿದ್ದು, ವಿಜ್ಞಾನವನ್ನು ಜನ ಸಾಮಾನ್ಯರೆಡೆಗೆ ಕೊಂಡೊಯ್ದು, ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವ ದೂರದೃಷ್ಠಿಯೊಂದಿಗೆ ಹಾಗೂ ರಾಜ್ಯಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಪ್ರಚುರಪಡಿಸಲು ರಾಜ್ಯ ಸರ್ಕಾರದ ಸಂಪೂರ್ಣ ಅನುದಾನದೊಂದಿಗೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಹಂತಗಳಲ್ಲಿ ಸ್ಥಾಪಿಸಲಾಗುತ್ತಿದೆ.