ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಕ್ವಾಂಟಮ್‌ ಇಂಡಿಯಾ ಬೆಂಗಳೂರು

ಜಾಗತಿಕ ಮಟ್ಟದಲ್ಲಿ ಕ್ವಾಂಟಮ್‌ ತಂತ್ರಜ್ಞಾನವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಕ್ವಾಂಟಮ್‌ ತಂತ್ರಜ್ಞಾನವು ಸಾಮಾನ್ಯ ಕಂಪ್ಯೂಟರ್‌ಗಳಿಗಿಂತ ಸಂಕೀರ್ಣ ಸಮಸ್ಯೆಗಳನ್ನು ಹೆಚ್ಚು ವೇಗವಾಗಿ ಪರಿಹರಿಸುವ ಮೂಲಕ ಗಣಕಯಂತ್ರ ಕ್ಷೇತ್ರದಲ್ಲಿ ಕ್ರಾಂತಿ ತರಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಕ್ರಿಪ್ಟೋಗ್ರಫಿ, ಹಣಕಾಸು ಮತ್ತು ವಸ್ತು ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಪರಿಣಾಮ ಬೀರುತ್ತದೆ. ಈ ಕ್ಷೇತ್ರದ ಕುರಿತು ರಾಜ್ಯದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು “ಕ್ವಾಂಟಮ್‌ ಇಂಡಿಯಾ ಬೆಂಗಳೂರು” (QIB) ಅಂತರರಾಷ್ಟ್ರೀಯ ಸಮ್ಮೇಳನವನ್ನು ದ್ವೈವಾರ್ಷಿಕವಾಗಿ ಆಯೋಜಿಸಲಾಗುತ್ತದೆ. ಇದರ ಮೊದಲ ಆವೃತ್ತಿಯನ್ನು 2025 ರ ಜುಲೈ 31 ಮತ್ತು ಆಗಸ್ಟ್ 1 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ.