ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
2023-24ನೇ ಸಾಲಿನ ಆಯವ್ಯಯ

ಪ್ಯಾರ ನಂ:277

ಕರ್ನಾಟಕ ಸಂಶೋಧನೆ, ಅಭಿವೃದ್ದಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್ ಆರ್ ಎಫ್) ರಚಿಸಲಾಗುವುದು.

 

ಪ್ಯಾರ ನಂ:278

ರಾಜ್ಯದ ವಿಜ್ಞಾನ ಕೇಂದ್ರಗಳ ಮೂಲ ಸೌಲಭ್ಯಗಳನ್ನು ಬಲಪಡಿಸಲು, ಎರಡು ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ತಲಾ 50 ಲಕ್ಷ ರೂ. ವೆಚ್ಚದಲ್ಲಿ ಮತ್ತು ನಾಲ್ಕು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಈ ಯೋಜನೆಗೆ ಪ್ರಸ್ತುತ ವರ್ಷದಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

 

ಪ್ಯಾರ ನಂ:279

ಸಂಶೋಧನೆ ಮತ್ತು ನಾವೀನ್ಯತೆ ವ್ಯವಸ್ಥೆಯು ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳು ಸೇರಿದಂತೆ ಇವರ ನಡುವಿನ ಸಂಬಂಧಗಳ ಸಂಕೀರ್ಣ ವ್ಯವಸ್ಥೆಯಾಗಿದೆ. ಈ ಎಲ್ಲಾ ಭಾಗೀದಾರರನ್ನು ಒಟ್ಟುಗೂಡಿಸಲು ಮತ್ತು ಅವರ ನಡುವೆ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್ ಫಾರ್ಮ್ e-KRDIP ಅನ್ನು ರಚಿಸಲಾಗುವುದು.

 

ಪ್ಯಾರ ನಂ:280

ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ವ್ಯಾಖ್ಯಾನಿಸಲು ಮತ್ತು ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣೀಜ್ಯೀಕರಣಕ್ಕೆ ಬೆಂಬಲವನ್ನು ನೀಡುವ ಯೋಜನೆಗೆ ಐದು ಕೋಟಿ ರೂ. ಒದಗಿಸಲಾಗುವುದು.