ನಮ್ಮ ಬಗ್ಗೆ

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು (Karnataka Science and Technology Promotion Society – KSTePS) 2013 ರಲ್ಲಿ ಕರ್ನಾಟಕ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯಲ್ಲಿ, 1960ರ ಸೊಸೈಟಿಗಳ ನೋಂದಣಿ ಕಾಯ್ದೆಯಡಿ ಸ್ಥಾಪಿಸಲಾದ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಕೆಸ್ಟೆಪ್ಸ್ ನ ಧ್ಯೇಯೋದ್ದೇಶಗಳು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ ಹಾಗೂ ಅನುಷ್ಠಾನದ ನೆರವಿನ ಒಂದು ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಿ, ರಾಜ್ಯಾದ್ಯಂತ ಇಲಾಖೆಯ ಕಾರ್ಯಕ್ರಮಗಳ ನಿಧಿಗಳ ಹಂಚಿಕೆಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುವುದಾಗಿದೆ. ಅಲ್ಲದೆ, ರಾಜ್ಯದ ದೀರ್ಘಾವಧಿ ಅಭಿವೃಧ್ಧಿಗೆ ಉಪಯುಕ್ತವಾಗುವಂತಹ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿರುವ ಆಧ್ಯತಾ ವಲಯಗಳನ್ನು ಗುರುತಿಸಿ ಅವುಗಳನ್ನು ಅಭಿವೃಧ್ಧಿಪಡಿಸುವುದಾಗಿದೆ. ಸೊಸೈಟಿಯು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಸದಸ್ಯರುಗಳನ್ನು ಹೊಂದಿದೆ. ನಿರ್ದೇಶಕರು (ತಾಂತ್ರಿಕ), ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಇವರು ಸಂಸ್ಥೆಯ ಸದಸ್ಯ ಕಾರ್ಯದರ್ಶಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 13-07-2020 01:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ