ಅಭಿಪ್ರಾಯ / ಸಲಹೆಗಳು

ವಿಜ್ಞಾನ ಜನಸಮೂಹ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು

ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರೋತ್ಸಾಹಕ್ಕಾಗಿ, ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೊತೆಗೆ, ಪ್ರಸಿದ್ದ ವಿಜ್ಞಾನಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಗಳನ್ನು “ವಿಜ್ಞಾನ ಮತ್ತು ತಂತ್ರಜ್ಞಾನ”ದ ವಾರ್ಷಿಕ ಸಮ್ಮೇಳನಗಳಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. 

ಕೆಸ್ಟೆಪ್ಸ್ ಮತ್ತು ಡಿಎಫ್‍ಜಿ (ಜರ್ಮನ್ ರಿಸರ್ಚ್ ಫೌಂಡೇಶನ್) ಸಂಸ್ಥೆಯು ಜಂಟಿಯಾಗಿ ಕರ್ನಾಟಕ ಮೂಲದ ಸಂಶೋಧಕರಿಗೆ ಸಂಶೋಧನೆಗಳಿಗೆ ಅನುದಾನ ಪಡೆಯುವ ಅವಕಾಶಗಳಿಗೆ ಬರೆಯುವ ಪ್ರಸ್ತಾವನೆಗಳ ಬರವಣಿಗೆ-ಕೌಶಲ್ಯ ಹೆಚ್ಚಿಸುವ ಒಂದು ದಿನದ ಕಾರ್ಯಗಾರವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ವಿವಿಧ ಸಂಸ್ಥೆಗಳಿಂದ ಸುಮಾರು 100 ಸಂಶೋಧಕರು ಇದರಲ್ಲಿ ಭಾಗವಹಿಸಿದ್ದರು. 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜನವರಿ 2 ರಿಂದ 7, 2020 ರವರೆಗೆ ಆಯೋಜಿಸಲಾಗಿದ್ದ ‘ಪ್ರೈಡ್ ಆಫ್ ಇಂಡಿಯಾ’ ಪ್ರದರ್ಶನದಲ್ಲಿ ಇಲಾಖೆಯು ಭಾಗವಹಿಸಿತ್ತು.

   

 ಚಿತ್ರ: ಪ್ರೈಡ್ ಆಫ್ ಇಂಡಿಯಾ ಪ್ರದರ್ಶನದಲ್ಲಿ ಇಲಾಖೆಯ ಮಳಿಗೆ

ಇತ್ತೀಚಿನ ನವೀಕರಣ​ : 20-08-2020 12:20 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ