ಅಭಿಪ್ರಾಯ / ಸಲಹೆಗಳು

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ

ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವನ್ನು 2008 ರಲ್ಲಿ ಖ್ಯಾತ ವಿಜ್ಞಾನಿ ಭಾರತರತ್ನ ಪ್ರೊ. ಸಿ. ಎನ್. ಆರ್. ರಾವ್, ಎಫ್.ಆರ್.ಎಸ್., ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕರು ಹಾಗೂ ಗೌರವಾನ್ವಿತ ಅಧ್ಯಕ್ಷರು, ಜೆ.ಎನ್.ಸಿ.ಎಸ್.ಎ.ಆರ್., ರವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು. ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ದಾರ್ಶನಿಕ ಸಮೂಹದ ಯೋಜನೆಗಳ ಸಂಯೋಜನೆ ಹಾಗೂ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ರಾಜ್ಯದ ಸರ್ವೋನ್ನತ ಮಂಡಳಿಯಾಗಿ ಕಾರ್ಯನಿರ್ವಹಿಸುತ್ತಿದೆ.  

 ದಾರ್ಶನಿಕ ಸಮೂಹದ ಶಿಫಾರಸ್ಸಿನಂತೆ, ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಮುಖ ಯೋಜನೆಗಳು ಈ ಕೆಳಕಂಡಂತಿವೆ:

  1. ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯದ ಶ್ರೇಷ್ಠ ಕೇಂದ್ರಗಳ ಸ್ಥಾಪನೆ (CESEM) - ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದ ಶ್ರೇಷ್ಠ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲಾಗುತ್ತಿದೆ.

  2. ವಿಜ್ಞಾನ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಸೃಜನಶೀಲ ಕೇಂದ್ರಗಳ ಸ್ಥಾಪನೆ (CISEE) - ವಿಜ್ಞಾನ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಸೃಜನಶೀಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲಾಗುತ್ತಿದೆ.

  3. ವಿಜ್ಞಾನಿಗಳು ಮತ್ತು ಬೋಧಕರಿಗೆ ಸಂಶೋಧನೆಗಾಗಿ ಅನುದಾನ (RGS/F) - ವಿಜ್ಞಾನ ಮತ್ತು ಇಂಜಿನಿಯರಿಂಗ್ ಕಾಲೇಜಿನ ವಿಜ್ಞಾನಿಗಳು ಮತ್ತು ಬೋಧಕರಿಗೆ ಸಂಶೋಧನೆಯನ್ನು ಕೈಗೆತ್ತಿಕೊಳ್ಳಲು ಉತ್ತೇಜಿಸಿ ನೆರವು ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

  4. ಕರ್ನಾಟಕದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲ ಸೌಕರ್ಯಾಭಿವೃದ್ಧಿಗೆ ನಿಧಿ (K-FIST) - ರಾಜ್ಯದಲ್ಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಶೋಧನೆಗೆ ಪೂರಕವಾದ ಮೂಲ ಸೌಕರ್ಯಗಳ ಬಲವರ್ಧನೆಗಾಗಿ ಅನುದಾನದ ನೆರವನ್ನು ಒದಗಿಸುವುದು ಕೆ-ಫಿಸ್ಟ್ ಕಾರ್ಯಕ್ರಮದ ಉದ್ದೇಶವಾಗಿದೆ.

  5. ಸಂಶೋಧನಾ ಪ್ರಬಂಧಗಳಿಗೆ ಪ್ರಶಸ್ತಿ (ARP) - ರಾಜ್ಯದಲ್ಲಿನ ಕಾಲೇಜು, ವಿಶ್ವವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಗುಣಮಟ್ಟದ ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟಿಸಿದ ಅಧ್ಯಾಪಕರುಗಳನ್ನು ಉತ್ತೇಜಿಸಿ, ಪ್ರಶಸ್ತಿ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ : http://www.vgst.in/ 

 

 

 

 

 

ಇತ್ತೀಚಿನ ನವೀಕರಣ​ : 29-10-2020 10:16 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080